ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ : ಆರೋಪಿಗೆ 15 ವರ್ಷ ಕಠಿಣ ಶಿಕ್ಷೆ

ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ : ಆರೋಪಿಗೆ 15 ವರ್ಷ ಕಠಿಣ ಶಿಕ್ಷೆ

ತುಮಕೂರು: ಜಿಲ್ಲೆ ಯ ಮಧುಗಿರಿ ತಾಲೂಕು ಬಡವನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದ ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ವೆಸ ಗಿದ್ದ ಆರೋಪಿಗೆ ಮಧುಗಿರಿ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದ ನ್ಯಾಯಾಧೀಶರು 15 ವರ್ಷ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ದಿನಾಂಕ 06/09/2021 ರಂದು ಮಧ್ಯಾಹ್ನ 3.30 ರಲ್ಲಿ ಮನೆಯಲ್ಲಿದ್ದ ಬುದ್ಧಿಮಾಂದ್ಯ ಮಹಿಳೆಯನ್ನು ಸಮೀಪದ ಬಂಡೆ ಹತ್ತಿರ ಕರೆದುಕೊಂಡು ಹೋಗಿ ಆರೋಪಿ ತಿಮ್ಮಪ್ಪ(65) ಎಂಬಾತಅತ್ಯಾಚಾರ ವೆಸಗಿ ನಾಲ್ಕು ತಿಂಗಳ ಗರ್ಭಿಣಿಯಾಗಲು ಕಾರಣನಾಗಿದ್ದ ,ಈ ಬಗ್ಗೆ ಬಡವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇನ್ಸ್ಪೆಕ್ಟರ್ ಹೆಚ್ ಜಿ. ಹನುಮಂತರಾಯಪ್ಪ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದರು.

ಎರಡು ಕಡೆಯ ವಾದ ಆಲಿಸಿದ ಮಧುಗಿರಿಯ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ ಕರಕೇರ ರವರು ಆರೋಪ ಸಾಬೀತಾದ್ದರಿಂದ ಆರೋಪಿಗೆ 15 ವರ್ಷ ಕಠಿಣ ಶಿಕ್ಷೆ ಹಾಗೂ 1.00.000/ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸರ್ಕಾರಿ ಅಭಿಯೋಜಕ ಬಿ. ಎಂ. ನಿರಂಜನಮೂರ್ತಿ ಅಭಿ ಯೋಜನೆ ಪರವಾಗಿ ವಾದ ಮಂಡಿಸಿದ್ದರು.