32 ಜೂಜು ಕೊರರ ಬಂಧನ

ತುಮಕೂರು: ಇಲ್ಲಿನ ಕ್ಯಾತ್ಸಂದ್ರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಜೂಜಾಡುತ್ತಿದ್ದ ತಂಡದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ನೇತೃತ್ವದ ತಂಡ ದಿಡೀರ್ ದಾಳಿ ನಡೆಸಿ 32 ಮಂದಿಯನ್ನು ವಶಕ್ಕೆ ಪಡೆದು 15 ಲಕ್ಷಕ್ಕೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

ನಗರದ ಹೊರವಲಯದಲ್ಲಿರುವ ನವೋದಯ ಶಾಲೆ ಹಿಂಭಾಗ ಜೂಜಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಅಡಿಷನಲ್ ಎಸ್ ಪಿ ಪುರುಷೋತ್ತಮ್, ಡಿವೈಎಸ್ಪಿ ಜಯಲಕ್ಷ್ಮಮ್ಮ ಮತ್ತು ಸಿಬ್ಬಂದಿ ದಿಡೀರ್ ದಾಳಿ ನಡೆಸಿ 32 ಮಂದಿಯನ್ನು ಬಂಧಿಸಿ ಕಾರು ದ್ವಿಚಕ್ರ ವಾಹನಗಳು ಸೇರಿದಂತೆ 30 ವಾಹನ, ಪಣಕ್ಕಿಟ್ಟಿದ್ದ 15 ಲಕ್ಷ 12,000 ನಗದನ್ನು ವಶಪಡಿಸಿಕೊಂಡು ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಜರುಗಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.