ತುಮಕೂರು: ಇಲ್ಲಿನ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ತುಮಕೂರು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ.
ಜಿಲ್ಲೆಯ ಪಾವಗಡ ತಾಲೂಕ್ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ವ್ಯಾಪ್ತಿಯಲ್ಲಿ ಮೀನುಗಾರರಿಗೆ ಸಬ್ಸಿಡಿ ಹಣ ಬಿಡುಗಡೆ ಮಾಡುವಲ್ಲಿ ಮತ್ತು ಕೆರೆಗಳಿಗೆ ಮೀನು ಬಿಡಲು ಹಂಚಿಕೆ ಮಾಡುವಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ಇಂದು ತುಮಕೂರು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಕಡತಗಳ ತಪಾಸಣೆ ಮಾಡಿ ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.
ತನಿಕಾ ಕಾರ್ಯ ನಾಳೆಯೂ ಮುಂದುವರೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ತನಿಖೆಯ ನಂತರವಷ್ಟೇ ಹೆಚ್ಚಿನ ಮಾಹಿತಿ ದೊರೆಯಬೇಕಿದೆ.
