ತುಮಕೂರು: ಕೆರೆಯಲ್ಲಿ ಈಜಲು ಹೋದ ಯುವಕ ಮುಳುಗುತ್ತಿರುವುದನ್ನು ನೋಡಿ ಮತ್ತೋರ್ವ ಯುವಕ ಕೆರೆಯಲ್ಲಿ ಮುಳುಗಿ ಇಬ್ಬರೂ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಶೆಟ್ಟಿಹಳ್ಳಿ ಉತ್ತರ ಕಟ್ಟೆಯಲ್ಲಿ ಸಂಭವಿಸಿದೆ.

ಮೃತರನ್ನು ದರ್ಶನ್ (೨೧), ರಜನಿಕಾಂತ್ (೨೦) ಎಂದು ಗುರುತಿಸಲಾಗಿದೆ. ೧೦ ಕ್ಕೂ ಹೆಚ್ಚುಮಂದಿ ಅಗ್ನಿಶಾಮಕದಳದ ಸಿಬ್ಬಂದಿ ಶೋಧಕಾರ್ಯ ನಡೆಸಿ ಮೃತ ದೇಹಗಳನ್ನು ಪತ್ತೆಹಚ್ಚಿ, ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಮದ್ಯಾಹ್ನ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.
