ತಂದೆಯಿಂದ ಹಲ್ಲೆ ಮಗನ ಕೊಲೆ

ತಂದೆಯಿಂದ ಹಲ್ಲೆ ಮಗನ ಕೊಲೆ
ತಂದೆಯಿಂದ ಹಲ್ಲೆ ಮಗನ ಕೊಲೆ
ಕುಣಿಗಲ್‌: ಪತ್ನಿಯೊಂದಿಗೆ ಜಗಳವಾಡುತ್ತಿದ್ದ ತಂದೆಯನ್ನು ಸಮಾಧಾನಪಡಿಸಿ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ 16 ವರ್ಷದ ಮಗ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ತಂದೆಯ ಹಲ್ಲೆಯಿಂದ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಹುತ್ರಿದುರ್ಗ ಹೋಬಳಿಯ ಚೌಡನಾಯಕನಪಾಳ್ಯ ಗ್ರಾಮದಲ್ಲಿ ಭಾನುವಾರ ಮುಂಜಾನೆ ನಡೆದಿದೆ.

ಮೃತ ಬಾಲಕನನ್ನು ಗ್ರಾಮದ ನಂಜೇಗೌಡ (45) ಅವರ ಪುತ್ರ ಸುನಿಲ್ ಎಂದು ಗುರುತಿಸಲಾಗಿದೆ. ನಂಜೇಗೌಡ ಅವರು ಪತ್ನಿ ರಂಜಿತಾ ಅವರೊಂದಿಗೆ ಜಗಳವಾಡುತ್ತಿದ್ದ ಸಂದರ್ಭದಲ್ಲಿ ಸುನಿಲ್‌ ಜಗಳ ಬಿಡಿಸಲು ಮುಂದಾಗಿದ್ದಾನೆ. ಈ ವೇಳೆ ಆಕ್ರೋಶಗೊಂಡ ತಂದೆ ಕೋಲಿನಿಂದ ಮಗನ ಮೇಲೆ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಸುನಿಲ್‌ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಕುಣಿಗಲ್ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟ‌ರ್ ಮಧ್ಯ ನಾಯಕ್‌ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆದಿದೆ ಎಂದು ತಿಳಿದುಬಂದಿದೆ.