ತುಮಕೂರು: ತಾಲೂಕಿನ ಹೆಬ್ಬೂರು ಪೊಲೀಸ್ ಠಾಣೆ ಸರಹದ್ದಿನ ಕಾಚೇನಹಳ್ಳಿ ಮತ್ತು ನಾಗವಲ್ಲಿಯಲ್ಲಿ ಜೂಜು ಅಡ್ಡಗಳ ಮೇಲೆ ಪೊಲೀಸರು ದಾಳಿ ನಡೆಸಿ 15 ಮಂದಿಯನ್ನು ಬಂಧಿಸಿ ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.
ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಕಾಚೇನ ಹಳ್ಳಿ ಗ್ರಾಮ ದಲ್ಲಿ ಜೂಜಾಡುತ್ತಿದ್ದ ಏಳು ಮಂದಿಯನ್ನು ಬಂಧಿಸಿ ಪಣಕಿಟ್ಟಿದ್ದ 25,000ಗಳನ್ನು ವಶಪಡಿಸಿಕೊಂಡಿದ್ದಾರೆ.
ನಾಗವಲ್ಲಿ ಬಳಿ ಜೂಜು ಅಡ್ಡೆ ಮೇಲೆ ದಾಳಿ ಮಾಡಿ ಒಂಬತ್ತು ಜನರನ್ನು ವಶಕ್ಕೆ ಪಡೆದು 65 ಸಾವಿರ ರೂಗಳನ್ನು ವಶಪಡಿಸಿಕೊಂಡು ಹೆಬ್ಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ, ಡಿ ವೈ ಎಸ್ ಪಿ ಚಂದ್ರಶೇಖರ್, ಕ್ಯಾತ್ಸಂದ್ರ ಸರ್ಕಲ್ ಇನ್ಸ್ಪೆಕ್ಟರ್ ರಾಘವೇಂದ್ರ ನೇತೃತ್ವದಲ್ಲಿ ಪಿಎಸ್ಐ ನವೀನ್ ಮತ್ತು ಸಿಬ್ಬಂದಿ ಎರಡು ಕಡೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.
ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿ ಬಿಟ್ಟು ಪ್ರಸ್ತುತ ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂಜಾಟ ಜಾಸ್ತಿಯಾಗಿದೆ ಎಂದು ಸಾರ್ವಜನಿಕರು ದೊರುತ್ತಿದ್ದಾರೆ. ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡಿಕೊಂಡು ಜೂಜುಅಡ್ಡೆ ನಡೆಸುವವರಿಗೆ ಸಪೋರ್ಟ್ ಮಾಡುತ್ತಿದ್ದಾರೆಂದು ತಿಳಿದು ಬಂದಿದೆ.
