ತುಮಕೂರು: ತುಮಕೂರು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾಗಿದ್ದ ಸುಬ್ರಹ್ಮಣ್ಯ ರವರಿಗೆ ಇಲ್ಲಿನ 7ನೇ ಹೆಚ್ಚುವರಿ ಸತ್ರ ನ್ಯಾಯಾಲಯ 5 ವರ್ಷ ಜೈಲು, 2 ಕೋಟಿ 32 ಲಕ್ಷ ರೂ ದಂಡ ವಿಧಿಸಿ ತೀರ್ಪು ನೀಡಿದೆ.
2016ರಲ್ಲಿ ಅಂದಿನ ಎಸಿಬಿ ಅಧಿಕಾರಿಗಳು ಆರ್. ಸುಬ್ರಹ್ಮಣ್ಯ ರವರು ತಮ್ಮ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಮನೆ, ಕಚೇರಿ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಅಂದಿನ ಅಧಿಕಾರಿಗಳಾದ ಹಾಲಪ್ಪ, ರಮೇಶ್ ರವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದರು.
ಇಲ್ಲಿನ 7ನೇ ಹೆಚ್ಚುವರಿ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಎರಡು ಕಡೆಯ ವಾದ ಆಲಿಸಿ ಆರೋಪ ದೃಢಪಟ್ಟಿದ್ದರಿಂದ ಆರೋಪಿಗೆ 5 ವರ್ಷ ಜೈಲು ಶಿಕ್ಷೆ ಮತ್ತು ಎರಡು ಕೋಟಿ 32 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.