ತುಮಕೂರು – ಪ್ರಕರಣವೂಂದಕ್ಕೆ ಸಂಬಂಧಿಸಿದಂತೆ ಪಾಕ್ಷಿಕ ಪತ್ರಿಕೆಯ ಸಂಪಾದಕರೊಬ್ಬರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯಿಂದ ಪ್ರಕಟಗೊಳ್ಳುವ ಪಾಕ್ಷಿಕ ಪತ್ರಿಕೆಯ ಸಂಪಾದಕನನ್ನು ತುಮಕೂರು ನಗರದ ಠಾಣೆಯೊಂದರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಪತ್ರಿಕೆ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಕೆಲ ಅಧಿಕಾರಿಗಳು ಪ್ರತಿಕ್ರಿಯಿಸಲು ನಿರಾಕರಿಸಿದ್ದು, ಕೆಲ ಅಧಿಕಾರಿಗಳು ಫೋನ್ ಕರೆ ಸ್ವೀಕರಿಸುತ್ತಿಲ್ಲ. ಆದ್ದರಿಂದ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.