ಕೆ ಐ ಎ ಡಿ ಬಿ ಅಪರ ನಿರ್ದೇಶಕನ ಮನೆ ಮೇಲೆ ಲೋಕಾಯುಕ್ತ ದಾಳಿ

ನಿವೃತ್ತ ಆರ್ ಟಿ ಓ, ರಾಜು, ಖಾಸಗಿ ವ್ಯಕ್ತಿ ಸತೀಶ್ ಮನೆ ಮೇಲೆ ಲೋಕಾಯುಕ್ತ ದಾಳಿ

ತುಮಕೂರು ಕೆ ಐ ಏ ಡಿ ಬಿ ಅಪರ ನಿರ್ದೇಶಕ C.T ಮುದ್ದು ಕುಮಾರ್ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ .

ಇಂದು ಬೆಳಿಗ್ಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಬೆಂಗಳೂರಿನ ನಾಗರಬಾವಿ ಎರಡನೇ ಹಂತದಲ್ಲಿರುವ ವಾಸದ ಮನೆ, ಬೆಂಗಳೂರು ರೇಸ್ ಕೋರ್ಸ್ ರಸ್ತೆಯಲ್ಲಿರುವ ಖನಿಜ ಭವನದಲ್ಲಿರುವ ಕಚೇರಿ, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೂರು ಮನೆಗಳು ಹಾಗೂ ತುಮಕೂರು ಇಂಡಸ್ಟ್ರಿಯಲ್ ಏರಿಯಾದಲ್ಲಿ ಪ್ಲಾಸ್ಟಿಕ್ ಬಾಟಲ್ ತಯಾರಿಕಾ ಘಟಕ ಸೇರಿದಂತೆ ಒಟ್ಟು ಏಳು ಕಡೆ ದಾಳಿ ನಡೆಸಿದ್ದಾರೆ .

ತುಮಕೂರು ಲೋಕಾಯುಕ್ತ S.P ಲಕ್ಷ್ಮಿ ಗಣೇಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಉಮಾಶಂಕರ್, ರಾಮಕೃಷ್ಣಯ್ಯ ನೇತೃತ್ವದಲ್ಲಿ ದಾಳಿ ನಡೆದಿದೆ. ಮುದ್ದು ಕುಮಾರ್ ಅವರು ಅಪರ ನಿರ್ದೇಶಕರು ಕೆ ಐ ಏ ಡಿ ಬಿ ಖನಿಜ ಭವನ ಬೆಂಗಳೂರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ತಿಳಿಯಬೇಕಿದೆ