ರಾಷ್ಟ್ರೀಯ ಹೆದ್ದಾರಿ ಬದಿ ಗೋಡೆಗೆ ಆಟೋ ಡಿಕ್ಕಿ ಇಬ್ಬರ ಸಾವು

ತುಮಕೂರು: ಶಿರಾ- ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋರಿಕ್ಷಾ ರಸ್ತೆ ಬದಿ ಗೋಡೆಗೆ ಗುದ್ದಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಾಯಚೂರು ಜಿಲ್ಲೆ ಲಿಂಗಸೂರು ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಆಟೋರಿಕ್ಷಾ ಆಯತಪ್ಪಿ ರಸ್ತೆ ಬದಿಯ ಗೋಡೆಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ತುಮಕೂರು ಜನರಲ್ ಆಸ್ಪತ್ರೆ ಸೇರಿದ್ದಾರೆ. ಒಟ್ಟು ಏಳು ಮಂದಿ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ರಂದು ತಿಳಿದು ಬಂದಿದೆ.

ಮೃತಪಟ್ಟವರನ್ನು ದ್ಯಾಮಪ್ಪ ಮತ್ತು ದುರ್ಗಮ್ಮ ಎಂದು ಗುರುತಿಸಲಾಗಿದೆ. ಊರು ಕೆರೆ ಸಮೀಪವಿರುವ ಹೋಟೆಲ್ ಬಳಿ ಈ ದುರ್ಘಟನೆ ನಡೆದಿದೆ. ಸುದ್ದಿ ತಿಳಿದ ಕೂಡಲೇ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲೆಸಿಕೊಂಡು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ಶ್ರಮಿಸಿದ್ದಾರೆ.