ತುಮಕೂರು: ಜಿಲ್ಲೆಯ 11 ವಿಧಾನಸಭಾ ಕ್ಷೇತ್ರ ಮೂರು ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡ 10 ತಾಲೂಕುಗಳ ಪೈಕಿ 9 ತಾಲೂಕುಗಳನ್ನು ಬರಪೀಡಿತ ತಾಲೂಕು ಗಳೆಂದು ಘೋಷಿಸಲಾಗಿದ್ದು ತಿಪಟೂರು ತಾಲೂಕನ್ನು ಮುಂದಿನ ದಿನಗಳಲ್ಲಿ ಮಳೆ ಆದರಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿದೆ.
ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜ ಮತ್ತು ವಿವಿಧ ಅಧಿಕಾರಿಗಳೊಂದಿಗೆ ಜಿಲ್ಲೆಯ ಹತ್ತು ತಾಲೂಕುಗಳಲ್ಲೂ ಪ್ರವಾಸ ಮಾಡಿ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿ, ರೈತರೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಆಲಿಸಿದರು ನಂತರ ಸರ್ಕಾರಕ್ಕೆ ವರದಿ ನೀಡುವುದಾಗಿ ಪತ್ರಕರ್ತರಿಗೆ ತಿಳಿಸಿದ್ದರು.
ತುಮಕೂರು ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಪ್ರಮುಖವಾದದ್ದು. ಜುಲೈ ತಿಂಗಳಲ್ಲಿ ವಾಡಿಕೆ ಮಳೆ 67.6 ಮಿ. ಮೀ. ಆಗಬೇಕಿದ್ದು ಕೇವಲ 16.8 ಮಿ. ಮೀ. ಮಳೆಯಾಗಿತ್ತು ಶೇಕಡ 75 ರಷ್ಟು ಮಳೆ ಕೊರತೆಯಾಗಿದೆ. ಜಿಲ್ಲೆಯ 10 ತಾಲೂಕುಗಳಲ್ಲೂ ಮಳೆ ಕೊರತೆಯಾಗಿದೆ.
ಮುಂಗಾರು ಹಂಗಾಮಿನಲ್ಲಿ ಎಲ್ಲಾ ಕೃಷಿ ಬೆಳೆಗಳ ಬಿತ್ತನೆ ಕ್ಷೇತ್ರ ಒಟ್ಟುಗುರಿ 311657 ಹೆಕ್ಟರ್. ದಿನಾಂಕ 14.08.2026 ರ ವರೆಗೆ ಕೇವಲ 72052 ಹೆಕ್ಟರ್ ಬಿತ್ತನೆಯಾಗಿದೆ.166643 ಹೆಕ್ಟರ್ ರಾಗಿ ಬಿತ್ತನೆ ಗುರಿಗೆ 38183 ಹೆಕ್ಟರ್ ಮಾತ್ರ ಬಿತ್ತನೆಯಾಗಿದೆ 43000 ಹೆಕ್ಟರ್ ಶೇಂಗಾ ಬಿತ್ತನೆ ಆಗಬೇಕಿತ್ತು, ಆದರೆ 11457 ಹೆಕ್ಟರ್ ಬಿತ್ತನೆಯಾಗಿದೆ.12000 ಹೆಕ್ಟರ್ ತೊಗರಿಯಲ್ಲಿ5005 ಹೆಕ್ಟರ್ ಬಿತ್ತನೆಯಾಗಿದೆ.
ದಿನಾಂಕ 14.08.2026ರಂದು ಸರ್ಕಾರ ಹೊರಡಿಸಿರುವ ಆದೇಶದ ಅನ್ವಯ ಮಳೆ ಹಾಗೂ ಇತರೆ ಹವಾಮಾನ ಮಾನ ದಂಡಗಳನ್ನುಯ 9 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ. ಗ್ರೌಂಡ್ truthing ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸರ್ಕಾರ ಆದೇಶಿಸಿದ್ದು ಮುಂದಿನ ದಿನಗಳಲ್ಲಿ ತಿಪಟೂರು ತಾಲೂಕನ್ನು ಸಹ ಬರಪೀಡಿತ ತಾಲೋಕು ಎಂದು ಘೋಷಿಸುವ ಸಾಧ್ಯತೆಗಳು ಇವೆ ಎಂದು ಕೃಷಿ ಇಲಾಖೆ ಮೂಲಗಳು ತಿಳಿಸುವೆ.
ತುಮಕೂರು ಜಿಲ್ಲೆಯಲ್ಲಿ 2023-24 ನೇ ಸಾಲಿನಲ್ಲಿ ರೈತರಿಗೆ 72 ಕೋಟಿ ರೂಪಾಯಿಗಳ ವಿಮೆ ಮೊತ್ತ ಪಾವತಿಸಲಾಗಿದೆ. 2024-25 ನೇ ಸಾಲಿನಲ್ಲಿ ರೈತರಿಗೆ 1.62 ಕೋಟಿ ರೂಪಾಯಿಗಳ ಬೆಳೆ ವಿಮೆ ಮೊತ್ತ ಪಾವತಿಸಲಾಗಿದೆ. 2025-26 ನೇ ಸಾಲಿನಲ್ಲಿ ರೈತರಿಗೆ 7.71 ಕೋಟಿ ರೂಪಾಯಿಗಳ ಬೆಳೆ ವಿಮೆ ಮೊತ್ತ ಪಾವತಿಸಲಾಗಿದೆ.
ಜಿಲ್ಲೆಯಲ್ಲಿ ಪ್ರತಿ ವರ್ಷ ರೈತರು ಬೆಳೆ ವಿಮೆ ಕಂಪನಿಗಳಿಗೆ ಹಣ ಕಟ್ಟಿಕೊಂಡು ಬಂದಿದ್ದರೂ ಸಹ ವಾಡಿಕೆ ಮಳೆ ಗಿಂತ ಹೆಚ್ಚು ಮಳೆ ಬಂದಿದ್ದರಿಂದ ಎರಡು ವರ್ಷ ಜಿಲ್ಲೆಯಲ್ಲಿ ಎಲ್ಲಾ ರೈತರುಗಳಿಗೂ ವಿಮಹಣ ಬಿಡುಗಡೆಯಾಗಿಲ್ಲ.
ಉಪಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಜಿಲ್ಲೆಯಲ್ಲಿ ಪ್ರವಾಸ ಮಾಡಿದ ಸಂದರ್ಭದಲ್ಲಿ ಶಿರಾ ತಾಲ್ಲೂಕಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ7000 ರೈತರಿಗೆ ಬೆಳೆ ವಿಮೆ ಬಂದಿಲ್ಲ ಬೆಳೆ ವಿಮಾ ಕಂಪನಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.
ಸದ್ಯದಲ್ಲೇ ವಿಮಾ ಕಂಪನಿಗಳ ಅಧಿಕಾರಿಗಳ ಸಭೆ ಕರೆದು ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಕಟ್ಟುನಿಟ್ಟಿನ ಆದೇಶ ನೀಡುವುದಾಗಿ ತಿಳಿಸಿದ್ದರು. ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ ಕಳೆದ ಎರಡು ವರ್ಷ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಿದೆ ಆದ್ದರಿಂದ ರೈತರಿಗೆ ಯಾವುದೇ ನಷ್ಟವಾಗದ ಕಾರಣ ಬೆಳೆ ವಿಮೆ ಹಣ ಬಿಡುಗಡೆಯಾಗಿಲ್ಲ ಎಂದು ಕೆಡಿಪಿ ಸಭೆಯಲ್ಲೂ ಉಪಮುಖ್ಯಮಂತ್ರಿಗಳ ಗಮನಕ್ಕೆ ಅಧಿಕಾರಿಗಳು ತಂದಿದ್ದರು.
