ಗುಬ್ಬಿ: ಇಲ್ಲಿನ ಅರಣ್ಯ ಇಲಾಖೆಯ ಅಧಿಕಾರಿ ಒಬ್ಬರು ತುಮಕೂರು ಲೋಕಾಯುಕ್ತ ಪೊಲೀಸರು ಬೀಸಿದೆ ಬಲೆಗೆ ಲಂಚ ಪಡೆಯುವಾಗ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.
ಅರಣ್ಯ ಇಲಾಖೆ ವಲಯ ಅರಣ್ಯ ಅಧಿಕಾರಿ ಮತ್ತು ಗುತ್ತಿಗೆ ನೌಕರರೊಬ್ಬ ತುಮಕೂರು ಲೋಕಾಯುಕ್ತ ಪೊಲೀಸರು ಬೀಸಿದ್ದ ಬಗೆ ಇಂದು ಮಧ್ಯಾಹ್ನ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.
ಡಿವೈಎಸ್ಪಿ ಮಂಜುನಾಥ್ ಗೌಡ, ಸಂತೋಷ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ಗಳಾದ ರಾಘವೇಂದ್ರ, ಶಾಂತಿನಾಥ್ ಮತ್ತು ಸಿಬ್ಬಂದಿ ಬೀಸಿದ ಬಲೆಗೆ ವ್ಯಕ್ತಿ ಒಬ್ಬರಿಂದ ಎರಡು ಲಕ್ಷ ರೂ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.
ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.
