ತುಮಕೂರು – ನಾಲ್ಕು ಮಂದಿ ಪೊಲೀಸರ ಅಮಾನತ್ತು

ಪತ್ರಿಕಾ ಸಂಪಾದಕನ ಕೊಲೆಗೆ ಸಂಚು ಪ್ರಕರಣ: ನಾಲ್ಕು ಮಂದಿ ಪೊಲೀಸರ ಅಮಾನತ್ತು

ತುಮಕೂರು- ಕಳೆದ ವಾರ ಬೆಂಕಿಯ ಬಲೆ ಪತ್ರಿಕಾ ಸಂಪಾದಕ ಧನಂಜಯನವರ ಕೊಲೆಗೆ ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ದಂಡಿನ ಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಸಂಬಂಧ ಮೂರು ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು.

ಬಂಧಿತ ಆರೋಪಿ ಮಂಜುನಾಥ ರೆಡ್ಡಿ, ನವೀನ ಹಾಗೂ ನರಸಿಂಹಮೂರ್ತಿ ಇವರುಗಳ ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲಿಸಿದಾಗ ಇವರುಗಳ ಮೊಬೈಲ್ ಗೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಇಬ್ಬರು, ಜಯನಗರ ಠಾಣೆಯ ಓರ್ವ, ಟ್ರಾಫಿಕ್ ಪೊಲೀಸ್ ಠಾಣೆಯ ಮತ್ತೋರ್ವ ಕಾನ್ ಸ್ಟೇಬಲ್ ಹಾಗೂ ಎಸ್ಪಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಓರ್ವ ಸಿಬ್ಬಂದಿ ಬಂಧಿತ ಆರೋಪಿಗಳ ಮೊಬೈಲ್ ಗೆ ಇಲಾಖೆಯ ಹಲವು ಮಾಹಿತಿಯನ್ನು ವಾಟ್ಸಾಪ್ ಮೂಲಕ ಕಳುಹಿಸಿರುವುದು ತಿಳಿದು ಬಂದ ಹಿನ್ನೆಲೆಯಲ್ಲಿ ನಾಲ್ಕು ಮಂದಿ ಪೊಲೀಸರು, ಓರ್ವ ಎಸ್ಪಿ ಕಚೇರಿ ಸಿಬ್ಬಂದಿಯನ್ನು ಸೇರಿ ಒಟ್ಟು ಐದು ಮಂದಿಯನ್ನು ಅಮಾನತ್ತು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇಲಾಖಾ ಮಾಹಿತಿಯನ್ನು ಆರೋಪಿಗಳಿಗೆ ರವಾನೆ ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಅವರು ಯಾರ ಮುಲಾಜಿಗೂ ಒಳಗಾಗದೆ ಪ್ರಾಮಾಣಿಕವಾಗಿ ತನಿಖೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನು ಕೆಲ ಭ್ರಷ್ಟ ಅಧಿಕಾರಿಗಳು ಕಾನೂನು ಅಡಿ ಸಿಲುಕುವ ಸಾಧ್ಯತೆ ಇದೆ ಎಂಬ ಮಾತುಗಳು ಇಲಾಖಾ ವಲಯದಲ್ಲೇ ಕೇಳಿ ಬರುತ್ತಿವೆ.