3 ಮಂದಿ ಪೊಲೀಸರ ಸಸ್ಪೆಂಡ್

ತುಮಕೂರು: ಅಪರಾಧ ಪ್ರಕರಣಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆಂಬ ಆರೋಪದ ಮೇಲೆ ಪಾವಗಡ ಪೊಲೀಸ್ ಠಾಣೆಯ ಮೂರು ಮಂದಿ ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿದೆ.

ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಮಟ್ಕಾ, ಜೂಜಾಟ ಇನ್ನಿತರ ಪ್ರಕರಣಗಳಗೆ ಕುಮ್ಮಕ್ಕು ನೀಡುತ್ತಿದ್ದವರ ಸಸ್ಪೆಂಡ್ ಆಗಿಂದಾಗೆ ನಡೆಯುತ್ತಲೇ ಇದೆ. ಅಪರಾಧ ಕೃತ್ಯಗಳಿಗೆ ಪ್ರೋತ್ಸಾಹ ನೀಡುವ ಪೊಲೀಸರ ಸಂಖ್ಯೆ ಹೆಚ್ಚಾಗಿದೆ,

ಸಂತೋಷ್, ಶ್ರೀಕಾಂತ್ ನಾಯಕ್, ನಟೇಶ್ ಸಸ್ಪೆಂಡ್ ಆಗಿರುವ ಪೊಲೀಸರು, ದೀಪಾವಳಿ ಹಬ್ಬ ರಜೆ ಇರುವುದರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಿಂದ ಸಸ್ಪೆಂಡ್ ಆದೇಶ ಪತ್ರ ದೊರೆತಿಲ್ಲ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಕ್ಟೋಬರ್ 29ರಂದು ಸಸ್ಪೆಂಡ್ ಆದೇಶ ಹೊರಡಿಸಿದ್ದಾರೆ ಎಂದು ಪೊಲೀಸ್ ಮೂಲಗಳು ದೃಢ ಪಡಿಸಿವೆ.