ತುಮಕೂರು- ನಗರದ ಹನುಮಂತಪುರ ವಾಸಿ ರಮೇಶ್ ಎಂಬ ವ್ಯಕ್ತಿಯ ಮೇಲೆ ಬೆಳಗುಂಬ ಬಳಿ ನಿನ್ನೆ ರಾತ್ರಿ ಮಾರಣಾಂತಿಕ ಹಲ್ಲೆ ನಡೆದಿದ್ದು, ಇಲ್ಲಿಯವರೆಗೂ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ ಎಂದು ಹೇಳಲಾಗುತ್ತಿದೆ.
ರಮೇಶ್ ಅಲಿಯಾಸ್ ಕಾಪಾಡ್ ಎಂಬ ವ್ಯಕ್ತಿ ಬೆಳಗುಂಬ ಸಮೀಪದ ಜ್ಯೋತಿಪುರ ವಾಸಿ ದೇವರಾಜ ಅಲಿಯಾಸ್ ಬಡ್ಡೆ ಎಂಬಾತನ ಬಳಿ ಹಣಕಾಸಿನ ವ್ಯವಹಾರ ಮಾಡಿದ್ದು, ಹಣ ನೀಡಲು ವಿಳಂಬವಾದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ದೇವರಾಜು ರಮೇಶನನ್ನು ತನ್ನ ಮನೆಗೆ ಕರೆಸಿಕೊಂಡು ಸಾಲದ ಹಣ ಕೊಡುವುದು ವಿಳಂಬವಾಗಿದೆ. ವಾರಕ್ಕೆ 5 ಸಾವಿರ ಬಡ್ಡಿ ಕಟ್ಟುವಂತೆ ಕಿರುಕುಳ ನೀಡಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲು ಸಂಬಂಧಪಟ್ಟ ಪೊಲೀಸ್ ಠಾಣೆ ಅಧಿಕಾರಿಗಳು ಮೀನಮೇಣ ಎಣಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.