ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ನಾಲ್ಕೈದು ಮಂದಿ ಗಾಯ

ತುಮಕೂರು: ನಗರದ ಹುರುಳಿ ತೋಟ 1ನೇ ಕ್ರಾಸ್ (ಕೋತಿ ತೋಪು)ನಲ್ಲಿ ಕ್ಷುಲ್ಲಕ ವಿಷಯಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ನಾಲ್ಕೈದು ಮಂದಿ ಗಾಯ ಗೊಂಡಿದ್ದು ಒಬ್ಬರ ಸ್ಥಿತಿ ಗಂಭೀರ ವಾಗಿರುವ ಘಟನೆ ನಡೆದಿದೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಆಗಿಂದಾಗ್ಗೆ ಎರಡು ಮನೆಯವರ ನಡುವೆ ಘರ್ಷಣೆ ನಡೆಯುತ್ತಿತ್ತು.

ಇಂದು ತೀವ್ರ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳ ನಡುವೆ ಕ್ಷುಲ್ಲಕ ವಿಷಯಕ್ಕೆ ಮಾರಮಾರಿ ಘರ್ಷಣೆ ನಡೆದಿದ್ದು ಹಲವರು ಗಾಯಗೊಂಡು ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ತುಮಕೂರು ನಗರ ಠಾಣೆ ಪೊಲೀಸರು ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸುವಲ್ಲಿ ನೆರವಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖಾ ಕಾರ್ಯ ಮುಂದುವರಿಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ. ಆಡಿಷನಲ್ ಎಸ್ ಪಿ ಗಳಾದ ಗೋಪಾಲ್. ಪುರುಷೋತ್ತಮ್ ಮತ್ತು ಇನ್ನಿತರ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಹುರುಳಿ ತೋಟದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.

ಪೊಲೀಸರ ತನಿಖೆಯಿಂದಷ್ಟೇ ಘಟನೆ ಬಗ್ಗೆ ಸ್ಪಷ್ಟ ಮಾಹಿತಿ ಹೊರ ಬರಬೇಕಿದೆ.