ತುಮಕೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ ಕರ್ತವ್ಯಕ್ಕೆ ನೇಮಿಸಿರುವ ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ಏಪ್ರಿಲ್26 ರ ಮತದಾನ ದಿನದಂದು ಚುನಾವಣಾ ಕರ್ತವ್ಯಕ್ಕೆ ಸಕಾಲದಲ್ಲಿ ತೆರಳಲು ಅನುವಾಗುವಂತೆ ಆಯಾ ತಾಲ್ಲೂಕು ಕೇಂದ್ರಸ್ಥಾನದಿಂದ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಚುನಾವಣಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುವ ದೃಷ್ಟಿಯಿಂದ ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿರುವ ತಾಲ್ಲೂಕು ಕೇಂದ್ರ ಸ್ಥಾನದಿಂದ ಅವರನ್ನು ನೇಮಕ ಮಾಡಿದ ವಿಧಾನಸಭಾ ಕ್ಷೇತ್ರಗಳಿಗೆ ಕಳುಹಿಸಿಕೊಡಲು ಏಪ್ರಿಲ್25 ರಂದು ಬೆಳಿಗ್ಗೆ
6 ಗಂಟೆಗೆ ವಾಹನ ವ್ಯವಸ್ಥೆ ಮಾಡಲಾಗಿದೆ. ನಿಯೋಜಿತ ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ವಾಹನ ವ್ಯವಸ್ಥೆಯ ಪ್ರಯೋಜನ ಪಡೆದು ನೇಮಕವಾದ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಕರ್ತವ್ಯಕ್ಕೆ ಸಕಾಲದಲ್ಲಿ ಹೋಗಲು ತಿಳಿಸಲಾಗಿದೆ. ವಾಹನ ಹೊರಡುವ ಸ್ಥಳಗಳ ವಿವರ ಈ ಕೆಳಕಂಡಂತಿದೆ.
ವಾಹನ ಹೊರಡುವ ಸ್ಥಳ :-
ತುಮಕೂರು ಗ್ರಾಮಾಂತರ : ವಿಜಯನಗರದಲ್ಲಿರುವ ಸರ್ವೋದಯ ಪ್ರೌಢಶಾಲೆ ಹಾಗೂ ಸೋಮೇಶ್ವರ ಬಾಲಕಿಯರ ಪ್ರೌಢಶಾಲೆ; ತುಮಕೂರು ನಗರ : ಬಿ.ಹೆಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು; ಗುಬ್ಬಿ : ಮಾರನಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು; ಚಿಕ್ಕನಾಯಕನಹಳ್ಳಿ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು; ತಿಪಟೂರು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು; ತುರುವೇಕೆರೆ ಸರ್ಕಾರಿ ಜೂನಿಯರ್ ಕಾಲೇಜು; ಕುಣಿಗಲ್ ಪಟ್ಟಣದ ಮಹಾತ್ಮಗಾಂಧಿ ಸರ್ಕಾರಿ ಪದವಿ ಪೂರ್ವ ಕಾಲೇಜು; ಕೊರಟಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು; ಶಿರಾ : ಜ್ಯೋತಿನಗರದ ಸರ್ಕಾರಿ ಪ್ರಥಮ ದರ್ಜೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು; ಪಾವಗಡ ಸರ್ಕಾರಿ ಪದವಿ ಪೂರ್ವ ಕಾಲೇಜು; ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ವಾಹನ ಹೊರಡಲಿದ್ದು, ನಿಗಧಿತ ಸಮಯಕ್ಕೆ ಸರಿಯಾಗಿ ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ವಾಹನ ಹೊರಡುವ ಸ್ಥಳದಲ್ಲಿ ಹಾಜರಿರಬೇಕು ಎಂದು ಅವರು ತಿಳಿಸಿದ್ದಾರೆ.