ಮತದಾನ ಮಾಡಲು 12 ಪರ್ಯಾಯ ದಾಖಲೆಗಳು: ಡಿ.ಸಿ

ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್

ತುಮಕೂರು: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ ೨೬ರಂದು ಮತದಾನ ನಡೆಯಲಿದ್ದು, ಜಿಲ್ಲೆಯ ಮತದಾರರು ಚುನಾವಣಾ ಗುರುತಿನ ಚೀಟಿ (ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗಧಿಪಡಿಸಿರುವ ೧೨ ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತಿಳಿಸಿದ್ದಾರೆ.
ಮತದಾರರು ಮತ ಚಲಾಯಿಸಲು ಮತಗಟ್ಟೆಗಳಿಗೆ ಹೋದ ಸಂದರ್ಭದಲ್ಲಿ ಅವರು ಹೊಂದಿರುವ ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ (ಎಪಿಕ್ ಕಾರ್ಡ್)ಯನ್ನು ಹಾಜರುಪಡಿಸಬೇಕು. ಒಂದು ವೇಳೆ ಹಾಜರುಪಡಿಸಲು ಸಾಧ್ಯವಿಲ್ಲದಿದ್ದಲ್ಲಿ ಈ ಕೆಳಕಂಡ ಯಾವುದಾದರೂ ಒಂದು ಪರ್ಯಾಯ ದಾಖಲಾತಿಯನ್ನು ಕಡ್ಡಾಯವಾಗಿ ಹಾಜರು ಪಡಿಸಬೇಕು.

ಮತದಾನ ಮಾಡಲು 12 ಪರ್ಯಾಯ ದಾಖಲೆಗಳು: ಡಿ.ಸಿ
ಮತದಾನ ಮಾಡಲು 12 ಪರ್ಯಾಯ ದಾಖಲೆಗಳು: ಡಿ.ಸಿ

ಆಧಾರ್ ಕಾರ್ಡ್, ಎಂಎನ್‌ಆರ್‌ಇಜಿಎ(ನರೇಗಾ) ಜಾಬ್ ಕಾರ್ಡ್, ಬ್ಯಾಂಕ್ ಹಾಗೂ ಅಂಚೆ ಕಚೇರಿ ನೀಡಿದ ಭಾವಚಿತ್ರವಿರುವ ಪಾಸ್‌ಬುಕ್, ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪಾನ್ ಕಾರ್ಡ್, ಎನ್‌ಪಿಆರ್ ಅಡಿಯಲ್ಲಿ ಆರ್‌ಜಿಐ ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್‌ಪೋರ್ಟ್, ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ, ರಾಜ್ಯ, ಕೇಂದ್ರ ಸರ್ಕಾರದ ಹಾಗೂ ಸಾರ್ವಜನಿಕ ಉದ್ದಿಮೆಗಳು ತಮ್ಮ ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ, ಸಂಸದರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರುಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳು, ಅಂಗವಿಕಲರ ಗುರುತಿನ ಚೀಟಿ(ಯುಡಿಐಡಿ ಕಾರ್ಡ್)ಯ ಮೂಲ ಪ್ರತಿಗಳನ್ನು ಮತದಾನದ ವೇಳೆ ಪರ್ಯಾಯ ದಾಖಲೆಗಳನ್ನಾಗಿ ಬಳಸಬಹುದು ಎಂದು ಅವರು ತಿಳಿಸಿದ್ದಾರೆ.