ಜಿಲ್ಲಾ ಆಸ್ಪತ್ರೆಗೆ ಸಚಿವ ವಿ. ಸೋಮಣ್ಣ ಬೇಟಿ : ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚನೆ

ಜಿಲ್ಲಾ ಆಸ್ಪತ್ರೆಗೆ ಸಚಿವ ವಿ. ಸೋಮಣ್ಣ ಬೇಟಿ : ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚನೆ

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕು ಚಿನ್ನೆನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಕಲುಷಿತ ನೀರು ಕುಡಿದು ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳನ್ನು ಭೇಟಿ ಮಾಡಿದ ಕೇಂದ್ರ ಸಚಿವ ವಿ ಸೋಮಣ್ಣ ಯೋಗ ಕ್ಷೇಮ ವಿಚಾರಿಸಿ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚಿಸಿದರು.

ನಂತರ ವರದಿಗಾರರೊಂದಿಗೆ ಮಾತನಾಡಿದ ಅವರು ಕಲುಷಿತ ನೀರು ಕುಡಿದು ನೂರಕ್ಕೂ ಹೆಚ್ಚು ಮಂದಿ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ವಿಷಯ ತಿಳಿದು ನಾನು ಇಂದು ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಇಲ್ಲಿ ದಾಖಲಾಗಿರುವ ಎಲ್ಲರ ಯೋಗ ಕ್ಷೇಮ ವಿಚಾರಿಸಿದ್ದೇನೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೂ ಹೇಳಿದ್ದೇನೆ. ಘಟನೆಗೆ ಸಂಬಂಧಪಟ್ಟಂತೆ ನನಗೆ ಮಾಹಿತಿ ಜಿಲ್ಲಾಧಿಕಾರಿಗಳು ಕಳುಹಿಸಿಕೊಡುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ದೂರವಾಣಿ ಮೂಲಕ ತಿಳಿಸಿದ್ದಾರೆ. ಸ್ಪಷ್ಟ ಮಾಹಿತಿ ಬಂದ ನಂತರ ಎಲ್ಲ ವಿಷಯವು ತಿಳಿಯಲಿದೆ ಎಂದರು.

ಜಿಲ್ಲಾಧಿಕಾರಿಗಳಿಗೆ ದೂರವಾಣಿಯಲ್ಲಿ ಸಂಪರ್ಕ ಮಾಡಿದ ಕೇಂದ್ರ ಸಚಿವ ವಿ. ಸೋಮಣ್ಣ “ಏನಮ್ಮ ನಾನೊಬ್ಬ ಸಂಸದ ಯಾವ ಅಧಿಕಾರಿಯು ಇಲ್ಲಿಗೆ ಬಂದಿಲ್ಲ, ಡಿ ಎಚ್ ಓ, ಡಿ ಎಸ್ ಇಬ್ಬರು ಇದ್ದಾರೆ. ನನಗೆ ಒಂದು ಮಾಹಿತಿ ಕಳುಹಿಸಿ ಕೊಡಬೇಕಲ್ಲವಾ, ಇನ್ನು ಮುಂದೆ ಈ ರೀತಿಯಲ್ಲ ಆಗಬಾರದು” ಎಂದು ಜಿಲ್ಲಾ ಪಂಚಾಯತ್ ಸಿಇಒ ಸೇರಿ ಇಬ್ಬರಿಗೂ ಸ್ಪಷ್ಟ ಸೂಚನೆ ನೀಡಿದರು.
ಪ್ರಧಾನ ಮಂತ್ರಿಗಳು ನನಗೆ ಎರಡು ಖಾತೆಗಳನ್ನು ನೀಡಿದ್ದಾರೆ ಸಂತೃಪ್ತಿ ಇದೆ, ಜಲ ಶಕ್ತಿ, ರೈಲ್ವೆ ಯೋಜನೆ 2 ಖಾತೆಗಳು ಜವಾಬ್ದಾರಿ ಖಾತೆಗಳು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇನ್ನಿತರ ಮುಖಂಡರುಗಳು ನನ್ನ ಮೇಲೆ ವಿಶ್ವಾಸ ಇಟ್ಟು ಸಚಿವರನ್ನಾಗಿ ಮಾಡಿದ್ದಾರೆ ನಾನು ಅವರೆಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ, ರಾಜ್ಯದ ಅಭಿವೃದ್ಧಿಗೆ ಶ್ರಮ ವಹಿಸುತ್ತೇನೆ, ಸಾರ್ವಜನಿಕರು, ಬುದ್ಧಿಜೀವಿಗಳು, ಜಿಲ್ಲೆಯ ಮತದಾರರು ಅಗತ್ಯ ಸಲಹೆ ಸಹಕಾರ ನೀಡಬೇಕೆಂದು ಮನವಿ ಮಾಡಿದವರು ನಾನು ಮೊದಲು ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ನಂತರ ಸಚಿವ, ಜಿಲ್ಲೆಯ ಜನರ ನಿರೀಕ್ಷೆಯಂತೆ ನಾನು ಕಾರ್ಯನಿರ್ವಹಿಸುತ್ತೇನೆ ಎಂದು ಜಿಲ್ಲೆಯ ಜನತೆಗೆ ಸೋಮಣ್ಣ ಭರವಸೆ ನೀಡಿದರು.

ಇಂದು ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠ, ಸಿದ್ದರಬೆಟ್ಟ, ಎಲೆ ರಾಂಪುರ, ಸೇರಿದಂತೆ ಹಲವು ಮಠಗಳಿಗೆ ಭೇಟಿ ನೀಡಿ ಮಠಾಧಿಪತಿಗಳ ಆಶೀರ್ವಾದ ಪಡೆಯುತ್ತೇನೆ. ಭಾನುವಾರದಂದು ತುಮಕೂರಿನ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಯ ಮುಖಂಡರು ಕಾರ್ಯಕರ್ತರು ಮತ್ತು ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ ಜಿಲ್ಲೆಯ ಮುಖಂಡರು ಮತದಾರರು ಕಾರ್ಯಕ್ರಮಕ್ಕೆ ಬನ್ನಿ ಎಂದು ಆಹ್ವಾನಿಸಿದರು.

ಸಚಿವರ ಜೊತೆಯಲ್ಲಿ ಶಾಸಕರುಗಳಾದ ಜ್ಯೋತಿ ಗಣೇಶ್, ಬಿ, ಸುರೇಶ್ ಗೌಡ ಮಾಜಿ ಸಂಸದ ಜಿ.ಎಸ್. ಬಸವರಾಜು, ಮಾಜಿ ಸಚಿವ ಸೊಗಡು ಶಿವಣ್ಣ, ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಹೆಬ್ಬಾ ಕ ರವಿಶಂಕರ್ ಮತ್ತಿತರ ಮುಖಂಡರುಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಂಜುನಾಥ್, ಜಿಲ್ಲಾ ಶಸ್ತ್ರ ಚಿಕಿತ್ಸಕರು, ವೈದ್ಯರ ತಂಡ ಸಚಿವರೊಂದಿಗಿದ್ದರು.