ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಕೊತ್ತಗೆರೆ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಥಮ ದರ್ಜೆ ಸಹಾಯಕ ನನ್ನು ಕರ್ತವ್ಯದಿಂದ ಬಿಡುಗಡೆ ಗೊಳಿಸಿದೆ.
ನಾಗರಾಜ ಶೀರ್ಥಿ ಬಾವಿ ಎಂಬುವರು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ. ಹೆಚ್. ಕೃಷ್ಣ ಮತ್ತವರ ತಂಡ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭದಲ್ಲಿ ದಾಖಲಾತಿಯನ್ನು ಸರಿಯಾಗಿ ನಿರ್ವಹಿಸದ ಕಾರಣ ಕೂಡಲೇ ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಅಧ್ಯಕ್ಷರು ಸೂಚಿಸಿದ ಮೇರೆಗೆ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕ ಕೃಷ್ಣಪ್ಪ ಆದೇಶ ಹೊರಡಿಸಿದ್ದಾರೆ.
ವಸತಿ ಶಾಲೆಯಲ್ಲಿ ಪಡಿತರ ವ್ಯವಸ್ಥೆಗೆ ಸಂಬಂಧಿಸಿದಂತೆ ದಾಖಲಾತಿಗಳನ್ನು ಪರಿಶೀಲಿಸಲು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಕೇಳಿದಾಗ ಸಮರ್ಪಕ ದಾಖಲೆ ಒದಗಿಸದ ಕಾರಣ ತಾತ್ಕಾಲಿಕವಾಗಿ ಸದರಿ ನೌಕರರನ್ನು ಕರ್ತವ್ಯ ದಿಂದ ಬಿಡುಗಡೆ ಮಾಡಿ ಮುಂದಿನ ಕ್ರಮ ಜರುಗಿಸಲಾಗಿದೆ.