ತುಮಕೂರು ದಸರಾ: ಜಿಲ್ಲಾಡಳಿತದಿಂದ ಸಿಎಂ, ಡಿಸಿಎಂಗೆ ಆಮಂತ್ರಣ

ತುಮಕೂರು ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರಿಗೆ ಜಿಲ್ಲಾಡಳಿತದ ವತಿಯಿಂದ ಆಮಂತ್ರಣ ನೀಡಲಾಯಿತು.

ತುಮಕೂರು ದಸರಾ: ಜಿಲ್ಲಾಡಳಿತದಿಂದ ಡಿಸಿಎಂಗೆ ಆಮಂತ್ರಣ
ತುಮಕೂರು ದಸರಾ: ಜಿಲ್ಲಾಡಳಿತದಿಂದ ಡಿಸಿಎಂಗೆ ಆಮಂತ್ರಣ

ತುಮಕೂರಿನಲ್ಲಿ ಸೆ. 22 ರಿಂದ ಅ. 2 ರ ವರೆಗೆ 11 ದಿನಗಳ ಕಾಲ ಜಿಲ್ಲಾಡಳಿತ ವತಿಯಿಂದ ನಡೆಯಲಿರುವ ತುಮಕೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಅವರು ಆಮಂತ್ರಣ ಪತ್ರಿಕೆ ನೀಡಿ ಅಧಿಕೃತವಾಗಿ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.