ಪ್ರಜಾ ಪ್ರಭುತ್ವ ಯಶಸ್ಸಿಗೆ ಮತದಾನ ಪ್ರಮುಖವಾಗಿದೆ : ಪ್ರಭು. ಜಿ

ಪ್ರಜಾ ಪ್ರಭುತ್ವ ಯಶಸ್ಸಿಗೆ ಮತದಾನ ಪ್ರಮುಖವಾಗಿದೆ : ಪ್ರಭು. ಜಿ
ತುಮಕೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕೃಷಿ ಇಲಾಖೆ ತುಮಕೂರು ವತಿಯಿಂದ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಮತದಾನ ಬೃಹತ್ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಭಾರತವು ಪ್ರಜಾ ಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ದೊಡ್ಡ ದೇಶವಾಗಿರುವುದು ನಮ್ಮ ಹೆಮ್ಮೆ. ಇಲ್ಲಿ ಪ್ರತಿ ಪ್ರಜೆಯೂ ಪ್ರಭುವಾಗಿದ್ದಾನೆ. ಪ್ರಜಾ ಪ್ರಭುತ್ವ ಯಶಸ್ವಿಯಾಗಬೇಕಾದೆ ಪ್ರತಿಯೊಬ್ಬ ಅರ್ಹ ಮತದಾರರೂ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಬೇಕು. ಏಪ್ರಿಲ್ 26ರಂದು ಲೋಕಸಭಾ ಚುನಾವಣೆಯಿದ್ದು, ಎಲ್ಲರೂ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು ಎಂದರು.
ಪ್ರಜಾ ಪ್ರಭುತ್ವ ಯಶಸ್ಸಿಗೆ ಮತದಾನ ಪ್ರಮುಖವಾಗಿದೆ : ಪ್ರಭು. ಜಿ
ಮಾರುಕಟ್ಟೆಯಲ್ಲಿ ಜಾಥಾಕಾರ್ಯಕ್ರಮವನ್ನು ಹಮ್ಮಿಕೊಂಡು ಮತದಾನಕ್ಕೆ ಸಂಬಂಧಿಸಿದ ಘೋಷಾವಾಕ್ಯಗಳನ್ನು ಕೂಗುತ್ತ, ಮಾನವ ಸರಪಳಿ ರಚಿಸಿ ಕಡ್ಡಾಯವಾಗಿ ಮತದಾನ ಮಾಡುವಂತೆ ರೈತರಲ್ಲಿ, ಸಾರ್ವಜನಿಕರಲ್ಲಿ ಮನವಿ ಮಾಡಲಾಯಿತು.
ಮತದಾನ ಅರಿವು ಅಭಿಯಾನದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರು, ಕೃಷಿ ಇಲಾಖೆ ಉಪನಿರ್ದೇಶಕರು, ರೇಷ್ಮೆ ಇಲಾಖೆ ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿ ಭಾಗಿಯಾಗಿದ್ದರು.